ಜೈಪುರ್ : ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಮಸೀದಿಯೊಂದರಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಗುರುವನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿ ತನ್ನ ನಿವಾಸದ ಹೊರಗೆ ಆಟವಾಡುತ್ತಿದ್ದಾಗ, ಮಸೀದಿಯಲ್ಲಿ ಮೌಲ್ವಿಯಾಗಿರುವ ಆರೋಪಿ 22 ವರ್ಷದ ಅಸ್ಜದ್ ಆಕೆಯನ್ನು ಮಸೀದಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ವರದಿಯಾಗಿದೆ. ಪೊಲೀಸರ ಪ್ರಕಾರ, ಆಕೆಯ ತಾಯಿ ಬಾಲಕಿಯನ್ನು ಹುಡುಕಿಕೊಂಡು ಅವರ ಮನೆಯ ಎದುರು ಇರುವ ಮಸೀದಿಯೊಳಗೆ ಹೋದಾಗ ವಿಷಯ ಬೆಳಕಿಗೆ ಬಂದಿದೆ.
ಬಾಲಕಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಆರೋಪಿ ಅಸ್ಜದ್ (22) ಮಸೀದಿಯ ಮೌಲ್ವಿ ಅವಳನ್ನು ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದ್ದು, ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎಸ್ಎಚ್ಒ ರಾಜ್ಗಢ ರಾಮಜಿಲಾಲ್ ಮೀನಾ ತಿಳಿಸಿದ್ದಾರೆ.