ದೊಡ್ಡಬಳ್ಳಾಪುರ : ನಾಯಿ ಬೊಗಳುತ್ತದೆ ಎಂಬ ಕಾರಣಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಏರ್ ಗನ್ನಿಂದ ಶೂಟ್ ಮಾಡಿ ಕೊಂದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮಾದನಗೊಂಡನಹಳ್ಳಿಯಲ್ಲಿ ನಡೆದಿದೆ.
BREAKING NEWS : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು
ನಾಯಿ ಬೊಗಳಿದ್ದಕ್ಕೆ ಆಕ್ರೋಶಗೊಂಡ ಮಾದನಗೊಂಡನಹಳ್ಳಿ ಗ್ರಾಮದ ಕೃಷ್ಣಪ್ಪ ಎಂಬಾತ ಹರೀಶ್ ಸಾಕಿದ್ದ ರಾಕಿ ಎಂಬ 5 ವರ್ಷದ ನಾಯಿಯನ್ನು ಏರ್ ಗನ್ ನಿಂದ ಶೂಟ್ ಮಾಡಿದ್ದಾನೆ. ಗುಂಡಿನ ದಾಳಿಯಲ್ಲಿ 5 ವರ್ಷದ ರಾಕಿ ನಾಯಿ ಸ್ಥಳದಲ್ಲಿಯೇ ಸಾವನ್ನಪ್ಪಿದೆ.
ಇನ್ನೂ ಘಟನಾ ಸ್ಥಳಕ್ಕೆ ಪ್ರಾಣಿ, ಪಕ್ಷಿ ದಾಸೋಹ ಟ್ರಸ್ಟ್ನವರು ಭೇಟಿ ನೀಡಿದ್ದು, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೃತ ನಾಯಿಯ ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಸಹ ಜರುಗಿಸಲಾಗಿದೆ.
BIGG NEWS: ನಾಳೆಯಿಂದ ಮತ್ತೆ ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ