ತುಮಕೂರು: 13 ವರ್ಷದ ಬಾಲಕಿಯ ಮೇಲೆ ತಂದೆಯಿಂದಲೇ ಅತ್ಯಾಚಾರ ನಡೆದಿರುವುದಾಗಿ ಬಾಲಕಿಯ ತಾಯಿ ತಿಪಟೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯ ನಾಪತ್ತೆಯಾಗಿರುವ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಪತ್ನಿಯು ಕೂಲಿಗೆ ಹೋದಾಗ ತಂದೆಯು ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರಿನಲ್ಲಿ ಬಾಲಕಿ ತಿಳಿಸಿದ್ದಾರೆ.
ಮೇ 6ರಂದೇ ದೂರು ದಾಖಲಾಗಿತ್ತು. ಆದರೆ, ಈ ಪ್ರಕರಣ ಬೆಳಕಿಗೆ ಬಂದಿದೆ. ತನ್ನ ಪತಿಯು ತನ್ನ ಸ್ವಂತ 13 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತಾಯಿ ತನ್ನ ದೂರಿನಲ್ಲಿ ವಿವರಿಸಿದ್ದಾರೆ. ಬಾಲಕಿಯು ಅಪ್ರಾಪ್ತೆಯಾಗಿರುವುದರಿಂದ ಆತನ ಮೇಲೆ ಮಕ್ಕಳ ಮೇಲಿನ ಲೈಂಗಿಕ ಕಿರುಕುಳ ನಿಗ್ರಹ ಕಾಯ್ದೆ (ಪೋಕ್ಸೋ) ಪ್ರಕಾರ ದೂರು ದಾಖಲಾಗಿದೆ.