ಹಾಸನ : ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಮಹಿಳಾ ಪೊಲೀಸ್ ಪೇದೆಯನ್ನು ಕೊಂದು ವ್ಯಕ್ತಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
BREAKING NEWS : ನೇಪಾಳದಲ್ಲಿ ಭೂಕುಸಿತ : 13 ಜನರು ದುರ್ಮರಣ , 10 ಮಂದಿ ನಾಪತ್ತೆ
ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ ಪೊದೆಯೊಂದರಲ್ಲಿ ಮಹಿಳಾ ಪೊಲೀಸ್ ಪೇದೆ ಸುಧಾ ಮೃತದೇಹ ಸಿಕ್ಕಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಸುಧಾ ಕರ್ತವ್ಯ ನಿರ್ವಹಿಸುತ್ತಿದ್ದರು.
BIGG NEWS: ಇಡಿ ವಿಚಾರಣೆಗಾಗಿ ದೆಹಲಿಗೆ ಹೋಗುತ್ತೇನೆ; ಡಿ.ಕೆ ಶಿವಕುಮಾರ್ ಸ್ಪಷ್ಟನೆ
ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಸುಧಾರನ್ನು ಕಾರಿನಲ್ಲಿ ಕರೆದುಕೊಂಡು ಬಂದು ಅವರ ಚಿಕ್ಕಪ್ಪನ ಮಗ ಮಂಜುನಾಥ್ ಹತ್ಯೆಗೈದಿದ್ದಾನೆ ಎಂಬ ವಿಚಾರ ತಿಳಿದುಬಂದಿದೆ. ಸುಧಾ ಅವರನ್ನು ಕೊಲೆ ಮಾಡಿ, ಶುಕ್ರವಾರ ಶಿವಮೊಗ್ಗದ ಲಾಡ್ಜ್ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಮಂಜುನಾಥ್ ನೇಣಿಗೆ ಶರಣಾಗಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಅರಸೀಕೆರೆ ಗ್ರಾಮಾಂತರ ಹಾಗೂ ತುಮಕೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
BIGG NEWS: ಮಹಾರಾಷ್ಟ್ರದ ವೀರ್ ಜಲಾಶಯದಿಂದ ನೀರು ಬಿಡುಗಡೆ; ಭೀಮಾ ನದಿಗೆ ಹೋಗದಂತೆ ಗ್ರಾಮಸ್ಥರಿಗೆ ಎಚ್ಚರಿಕೆ