ಮಡಿಕೇರಿ : ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಸರ್ಕಾರಿ ಸಾಲೆಯ ನೀರಿನ ಟ್ಯಾಂಕ್ ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿರುವ ಘಟನೆ ನಡೆದಿದೆ.
ಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್ಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದು, ಶಾಲೆಯ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದ್ದು, ಎಲ್ಲಾ ಮಕ್ಕಳು ಸುರಕ್ಷತವಾಗಿದ್ದಾರೆ. ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಸುಂಟಿಕೊಪ್ಪ ಪೊಲೀಸರು ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
‘ಜಕ್ಕೂರು ವೈಮಾನಿಕ ತರಬೇತಿ ಶಾಲೆ’ಯಲ್ಲಿ ‘ಟ್ವಿನ್ ಎಂಜಿನ್ ವಿಮಾನ’ ಪರೀಕ್ಷಾರ್ಥ ಹಾರಾಟ ಯಶಸ್ವಿ- ಸಚಿವ ಡಾ.ನಾರಾಯಣಗೌಡ
ಬೆಳಗ್ಗೆ ಶೌಚಾಲಯ ಸ್ವಚ್ಛಗೊಳಿಸುವಾಗ ಪ್ರಕರಣ ಬೆಳಕಿಗೆ ಬಂದಿದೆ. ಶಾಲಾ ಸಿಬ್ಬಂದಿ ಶೌಚಾಲಯ ಸ್ವಚ್ಚಗೊಳಿಸಲು ಹೋದಾಗ ನೀರಿನ ಓವರ್ಟ್ಯಾಂಕ್ನ ಮುಚ್ಚಳ ತೆರೆದಿದ್ದು, ಟ್ಯಾಂಕ್ನಿಂದ ದುರ್ವಾಸನೆ ಬರುತ್ತಿರುವುದು ಕಂಡು ಬಂದಿದೆ. ಬಳಿಕ ಶಾಲಾ ಸಿಬ್ಬಂದಿಯಿಂದ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.