ಉಡುಪಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬಯಲಿಗೆ ಬಂದಿದ್ದು, ಕುಡಿದ ಮತ್ತಿನಲ್ಲಿ ಪತ್ನಿಯ ಕುತ್ತಿಗೆಗೆ ಹೊಡೆದು ಪತಿ ಡ್ಯಾನ್ಸ್ ಮಾಡಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರು ನಲ್ಲಿ ಪತ್ನಿ ಅನಿತಾ ಅವರಿಗೆ ಕತ್ತಿಯಿಂದ ಹಲ್ಲೆ ಮಾಡಿದ ಪತಿ ಲಕ್ಷ್ಮಣ ಡ್ಯಾನ್ಸ್ ಮಾಡಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದವರಾದ ಲಕ್ಷ್ಮಣ, ಅನಿತಾ ದಂಪತಿ ಕಾಶಿಮಠದ ತೋಟ ನೋಡಿಕೊಳ್ಳುತ್ತಿದ್ದರು.
ನಿನ್ನೆ ಲಕ್ಷ್ಮಣ ಕುಡಿದ ಮತ್ತಿನಲ್ಲಿ ಇಂತಹ ಕೃತ್ಯವೆಸಗಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಅನಿತಾ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.