ಮಂಗಳೂರು: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 49,000 ಅಪ್ರಾಪ್ತ ವಯಸ್ಕ ಗರ್ಭಪಾತಗಳು ನಡೆದಿರುವ ಬಗ್ಗೆ ಸತ್ಯಾಸತ್ಯತೆ ತಿಳಿಯಲು ಆಯೋಗವು ಪ್ರತಿ ಜಿಲ್ಲೆಗೆ ಸದಸ್ಯರನ್ನು ಸೇರಿಸಿ ಮರು ಸಮೀಕ್ಷೆ ನಡೆಸಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣ ಗೌಡ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕ, ಮಂಡ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ಲಭ್ಯವಾಗಿದೆ. ಹದಿನೆಂಟು ತುಂಬುವ ಮೊದಲೇ ವಿವಾಹ, ಅತ್ಯಾಚಾರ, ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಹೀಗೆ ಹಲವಾರು ರೀತಿಯಲ್ಲಿ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಪ್ರಕರಣಗಳು ಬಯಲಾಗುತ್ತಿದೆ ಅಂತ ಅವರು ಹೇಳಿದರು. ಇದೇ ವೇಳೇ ಅವರು ಕೆಲವೊಂದು ಪ್ರಕರಣಗಳಲ್ಲಿ ಸಂತ್ರಸ್ತೆಯರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳೂ ಬೆಳಕಿಗೆ ಬಂದಿದೆ. ಇಂತಹ ಪ್ರಕರಣಗಳನ್ನು ಮುಚ್ಚಿಟ್ಟ ವಿಚಾರದಲ್ಲಿ ಈಗಾಗಲೇ 6 – 7 ವೈದ್ಯರ ಮೇಲೆಯೇ ಪ್ರಕರಣ ದಾಖಲಾಗಿದೆ. ಅಲ್ಲದೆ ಒಂದೆರಡು ನರ್ಸಿಂಗ್ ಹೋಮ್ಗಳನ್ನೇ ಮುಚ್ಚಲಾಗಿದೆ ಎಂದರು.