ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮೂತ್ರ ವಿಸರ್ಜನೆ ಮಾಡುತ್ತಿದ್ದಾಗಲೇ ಕರೆಂಟ್ ಶಾಕ್ ನಿಂದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಮನೆ ಮುಂದೆ ಹಾದು ಹೋಗಿದ್ದ ಐಬೆಕ್ಸ್ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಮೃತ ಯುವಕನನ್ನು ಕಾರ್ತಿಕ್ (19) ಎಂದು ಗುರುತಿಸಲಾಗಿದೆ.
ಮನೆ ಮುಂದಿನ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.