ತುಮಕೂರು : ಕಳೆದ ಜನವರಿ 29 ರಂದು ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಪುಣ್ಯಸ್ನಾನ ಮಾಡುವ ವೇಳೆ ಭಾರಿ ಕಾಲ್ತುಳಿತದಿಂದ ಹಲವು ಜನರು ಸಾವನ್ನಪ್ಪಿದ್ದರು. ಅದರಲ್ಲಿ ಕರ್ನಾಟಕದ ಬೆಳಗಾವಿ ಮೂಲದ ನಾಲ್ವರು ಸಾವನಪ್ಪಿದ್ದರು. ಅಲ್ಲದೆ ಇತ್ತೀಚಿಗೆ ಕೆಲವರು ಹೃದಯಾಘಾತದಿಂದ ಕೂಡ ಸಾವನ್ನಪ್ಪಿದ್ದರು. ಇದೀಗ ಮತ್ತೊಂದು ಹಾರ್ಟ್ ಅಟ್ಯಾಕ್ ಪ್ರಕರಣ ವರದಿಯಾಗಿದ್ದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ವ್ಯಕ್ತಿ ಒಬ್ಬರು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡುವ ವೇಳೆ ಹೃದಯಾಘಾತವಾಗಿ ಸಾವನಪ್ಪಿದ್ದಾರೆ.
ಹೌದು ಕುಂಭಮೇಳದಲ್ಲಿ ಹೃದಯಾಘಾತದಿಂದ ರಾಜ್ಯದ ಮತ್ತೊರ್ವ ವ್ಯಕ್ತಿ ಸಾವನಪ್ಪಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಮಹಾ ಕುಂಭಮೇಳ ನಡೆಯುತ್ತಿದ್ದು ಈ ಒಂದು ಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾಗ ಹೃದಯಘಾತದಿಂದ ವ್ಯಕ್ತಿಯು ಒಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರು ಗ್ರಾಮದ ನಾಗರಾಜು (57) ಎಂದು ತಿಳಿದು ಬಂದಿದೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬರಗೂರು ಗ್ರಾಮದ ನಿವಾಸಿ ಯಾಗಿದ್ದು, ನಾಗರಾಜು ಬರಗೂರಿನ ಎಲ್‌ಎನ್‌ಪಿ ಬ್ರಿಕ್ಸ್ ನ ಮಾಲೀಕರಾಗಿದ್ದರು. ಇದೀಗ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.