ದಕ್ಷಿಣಕನ್ನಡ : ರಾಜ್ಯದಲ್ಲಿ ಹೃದಯಾಘಾತ ಸರಣಿ ಸಾವು ಮುಂದುವರೆದಿದ್ದು ಇಂದು ಬೆಳಿಗ್ಗೆ ತಾನೇ ಬಳ್ಳಾರಿಯಲ್ಲಿ ಶಾಲೆಗೆ ತೆರಳುವಾಗಲೇ ಕುಸಿದುಬಿದ್ದು 6ನೇ ತರಗತಿ ವಿದ್ಯಾರ್ಥಿನಿ ಸಾವನಪ್ಪಿದ್ದಳು. ಇದೀಗ ದಕ್ಷಿಣ ಕನ್ನಡದಲ್ಲಿ ಕಚೇರಿಗೆ ತೆರಳುವಾಗಲೇ FDA ನೌಕರರೊಬ್ಬರು ಕುಸಿದು ಬಿದ್ದು ಸಾವನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಹೃದಯಾಘಾತದಿಂದ FDA ನೌಕರ ಬಲಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಈ ಒಂದು ಘಟನೆ ನಡೆದಿದೆ. ಹೃದಯಘಾತದಿಂದ ಹಾಸನ ಮೂಲದ ಸತೀಶ್ (46) ಇದೀಗ ಸಾವನಪ್ಪಿದ್ದಾರೆ. ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಸತೀಶ್ ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಬೆಳಿಗ್ಗೆ ಮನೆಯಲ್ಲಿ ಸ್ನಾನ ಮಾಡಿ ಬರುವಾಗ ಸತೀಶ್ ಕುಸಿದು ಬಿದ್ದಿದ್ದಾರೆ ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಪತ್ನಿ ಜಯಶ್ರೀ ತೆರಳಿದ್ದಾರೆ.ಆಸ್ಪತ್ರೆಗೆ ಹೋದಾಗ ಸತೀಶ್ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.