ಮಂಡ್ಯ : ಪ್ರೇಯಸಿ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಮನನೊಂದು ಪಾಗಲ್ ಪ್ರೇಮಿಯೊಬ್ಬ ಜಿಲೆಟಿನ್ ನಿಂದ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಸವೇಶ್ವರನಗರದ ನಿವಾಸಿ ರಾಮಚಂದ್ರ (20) ಮೃತಪ್ರೇಮಿ, ಭೋವಿ ಸಮುದಾಯಕ್ಕೆ ಸೇರಿದ ರಾಮಚಂದ್ರ ಹಾಗೂ ಕಾಳೇನಹಳ್ಳಿ ಮತ್ತೊಂದು ಸಮುದಾಯದ ಅಪ್ರಾಪ್ತೆಯೊಬ್ಬಳು ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು. ಇಬ್ಬರ ವಿವಾಹಕ್ಕೆ ವಯಸ್ಸು ಮತ್ತು ಜಾತಿ ಅಡ್ಡಿಯಾಗಬಹುದೆಂಬ ಕಾರಣಕ್ಕೆ ಒಂದೂವರೆ ವರ್ಷದ ಹಿಂದೆ ಇಬ್ಬರೂ ಮನೆ ಬಿಟ್ಟು ಪರಾರಿಯಾಗಿದ್ರು. ಅಪ್ರಾಪ್ತೆ ಪೋಷಕರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ ಇಬ್ಬರನ್ನೂ ಪತ್ತೆ ಹಚ್ಚಿ ಪೋಕ್ಸೋ ಕೇಸ್ ದಾಖಲಿಸಿ ರಾಮಚಂದ್ರನನ್ನು ಜೈಲಿಗೆ ಕಳುಹಿಸಲಾಗಿತ್ತು.
ರಾಜೀ ಸಂದಾನದ ಮೂಲಕ ಇಬ್ಬರೂ ಅವರವರ ಮನೆಯಲ್ಲಿದ್ದರು. ಶನಿವಾರ ತಡರಾತ್ರಿ ಕಾಳೇನಹಳ್ಳಿ ಗ್ರಾಮದಲ್ಲಿ ರಾಮಚಂದ್ರ ಜಿಲಿಟಿನ್ ಸ್ಪೋಟಿಸಿಕೊಂಡು ಪ್ರಿಯತಮೆ ಮನೆ ಮುಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.