ಬೆಂಗಳೂರು : ಯುವತಿಯ ಫೋಟೋ ಬಳಸಿ ಅಶ್ಲೀಲವಾಗಿ ವಿಡಿಯೋ ಕ್ರಿಯೇಟ್ ಮಾಡಿದ್ದು, ಯುವತಿಯ ತಾಯಿಗೆ ಅಶ್ಲೀಲ ಎಡಿಟಿಂಗ್ ವಿಡಿಯೋ ಕಳಿಸಿ, ಬ್ಲಾಕ್ ಮೇಲ್ ಮಾಡಲಾಗಿದೆ. ಹಣಕ್ಕಾಗಿ ಬ್ಲಾಕ್ ಮೇಲೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಇದೀಗ ಬಂಧಿಸಲಾಗಿದೆ.
ಬಾವಿಕೆರಿಯ ಅಕ್ಷಯ್ ಹಾಗೂ ಸಾಹುಲ್ ನನ್ನು ಬಂಧಿಸಿದ ಪೊಲೀಸರು, ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. AI ವಿಡಿಯೋ ಎಡಿಟಿಂಗ್ ಅಪ್ಲಿಕೇಶನ್ ಬಳಸಿ ವಿಡಿಯೋ ಎಡಿಟ್ ಮಾಡಿದ್ದು, ಯುವತಿಯ ತಾಯಿಗೆ ವಿಡಿಯೋ ಕಳಿಸಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ನೀಡದಿದ್ದರೆ ಜಲತಾಣದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ.
ನೋಂದ ಯುವತಿಯ ತಂದೆಯಿಂದ ಲಕ್ಕವಳ್ಳಿ ಪೊಲೀಸರಿಗೆ ದೂರು ನೀಡಲಾಗಿದೆ. ಬೆಂಗಳೂರಲ್ಲಿ ಕೆಲಸ ಮಾಡಿಕೊಂಡಿದ್ದ ಅಕ್ಷಯ ಹಾಗೂ ಸಾಹುಲ್, ಯೋಗೇಶ್ ಹೆಸರಿನಲ್ಲಿ ರಾಹುಲ್ ಮತ್ತು ಅಕ್ಷಯ್ ಕರೆ ಮಾಡುತ್ತಿದ್ದರು. ಸದ್ಯ ಪೊಲೀಸರು ಬೆಂಗಳೂರಲ್ಲಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಈ ಹಿಂದೆಯೂ ಕೂಡ ಕಳ್ಳತನ ಪ್ರಕರಣದಲ್ಲಿ ಆರೋಪಿ ಸಾಹುಲ್ ಭಾಗಿಯಾಗಿದ್ದ ಎನ್ನಲಾಗಿದೆ.








