ಹಾಸನ : ಸೈಕಲ್ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಪುಟ್ಟ ಬಾಲಕನೋರ್ವ ಮೃತಪಟ್ಟಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಎಡನ್ ಸ್ವೀವ್ (4) ಮೃತ ಬಾಲಕ. ಮನೆಯ ಮುಂದೆ ಎಡನ್ ಸ್ವೀವ್ ಆಟವಾಡುತ್ತಿದ್ದ. ಹಾಸನದ ಅಣಚಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಾತ್ ಆಗಿ ನೀರಿನ ಸಂಪಿಗೆ ಬಿದ್ದಿದ್ದಾನೆ.
ನಂತರ ಪೋಷಕರು ಬಾಲಕನಿಗಾಗಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ನಂತರ ಸಂಪ್ ನೋಡಿದಾಗ ಸಂಪ್ ಪಕ್ಕದಲ್ಲಿ ಸೈಕಲ್ ಬಿದ್ದಿದ್ದು, ಶವ ಸಂಪ್ ನಲ್ಲಿ ತೇಲುತ್ತಿತ್ತು. ಕೂಡಲೇ ಹಾಸನ ನಗರದ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








