ಬೀದರ್ : ಬೀದರ್ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಆಟ ಆಡುವಾಗ ಬಾವಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ ಈಶ್ವರ ಕಾಲೋನಿಯಲ್ಲಿ ಈ ದುರಂತ ಘಟನೆ ನಡೆದಿದ್ದು, ಮನೆಯ ಹತ್ತಿರ ಆಟ ಆಡುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು 6 ವರ್ಷದ ಶೇಖ್ ನುಸ್ತಕಿಮ್ ಅಕ್ಬರ್ ಅಲಿ ಮೃತಪಟ್ಟಿದ್ದಾನೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಶವ ಹೊರತೆಗೆದಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಬಸವಕಲ್ಯಾಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.