ನಂಜನಗೂಡು: ರಾಜ್ಯದಲ್ಲಿ ಹೃದಯಾಘಾತದಿಂದ ಮತ್ತೊಬ್ಬರು ಮೃತಪಟ್ಟ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡಿನ ರಾಕ್ಷಸ ಮಂಟಪ ವೃತ್ತದಲ್ಲಿ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ವತಿಯಿಂದ ಜರುಗುವ ಅಂಧಕಾಸುರ ವಧೆ ಕಾರ್ಯಕ್ರಮದಲ್ಲಿ ಉತ್ಸವ ಮೂರ್ತಿಯನ್ನು ಹೊತ್ತ ಸಹಾಯಕ ಅರ್ಚಕ ಶಂಕರ ಉಪಾಧ್ಯಾಯ (55) ಹೃದಯಾಘಾತದಿಂದ ಕುಸಿದು ಮೃತಪಟ್ಟಿದ್ದಾರೆ.
ಪ್ರತಿ ವರ್ಷ ಸಂಪ್ರದಾಯದಂತೆ ನಡೆಯುವ ಅಂಧಕಾಸುರನ ವಧೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಅರ್ಚಕ ಉಪಾಧ್ಯಾಯ ಉತ್ಸವಮೂರ್ತಿ ಇದ್ದ ಪಲ್ಲಕ್ಕಿಗೆ ಭುಜ ಕೊಟ್ಟು ನಡೆಯುತ್ತಿದ್ದ ಕುಸಿದು ಬಿದ್ದರು. ಪಕ್ಕದಲ್ಲೇ ನಿಂತಿದ್ದ ಇತರ ಅರ್ಚಕರು ಉಪಾಧ್ಯಾಯ ಅವರ ನೆರವಿಗೆ ಧಾವಿಸಿದರು. ಕೂಡಲೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.








