ಬೆಂಗಳೂರು : ರಾಜ್ಯ ಔಷಧ ನಿಯಂತ್ರಣ ಇಲಾಖೆಯಿಂದ ನಡೆಸಿದ ಪ್ರಯೋಗಾಲಯ ಪರೀಕ್ಷೆಗಳಲ್ಲಿ 400 ಔಷಧಗಳ ಗುಣಮಟ್ಟ ಕಳಪೆಯಾಗಿದೆ ಎನ್ನುವುದು ದೃಢಪಟ್ಟಿದೆ.
ಹೌದು, ರಾಜ್ಯ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ವಿವಿಧ ಔಷಧಗಳ ಮಾದರಿಗಳನ್ನು ಸಂಗ್ರಹಿಸಿ, ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಿದ್ದರು. ಹಲವು ಔಷಧಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎನ್ನುವುದು ಪರೀಕ್ಷಾ ವರದಿಗಳಿಂದ ಖಚಿತಪಟ್ಟಿದೆ. ರಾಜ್ಯದ ಆಸ್ಪತ್ರೆಗಳು, ನರ್ಸಿಂಗ್ ಹೋಂಗಳು ಹಾಗೂ ಕ್ಲಿನಿಕ್‌ಗಳಲ್ಲಿ ಬಳಸಲಾಗುತ್ತಿರುವ ಔಷಧಗಳಿಗೆ ಸಂಬಂಧಿಸಿದಂತೆ 2023–24ನೇ ಸಾಲಿನಲ್ಲಿ ಇಲಾಖೆ ಅಧಿಕಾರಿಗಳು 7,420 ಔಷಧಗಳ ಮಾದರಿಗಳನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಿದ್ದರು. ಈ ಮಾದರಿಗಳಲ್ಲಿ 285 ಮಾದರಿಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲವೆಂಬ ವರದಿ ಬಂದಿದೆ.
2024–25ನೇ ಸಾಲಿನಲ್ಲಿ 3,636 ಮಾದರಿಗಳನ್ನು ಪ್ರಯೋಗಾಲಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ 177 ಮಾದರಿಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎನ್ನುವುದು ದೃಢಪಟ್ಟಿದೆ. ಇದೇ ರೀತಿ ರಾಜ್ಯ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ವಿವಿಧ ಔಷಧಗಳ ಮಾದರಿಯನ್ನು ಸಂಗ್ರಹಿಸಿ ಪ್ರಯೋಗಾಲಯಗಳಲ್ಲಿ ಗುಣಮಟ್ಟ ಪರೀಕ್ಷೆಗೆ ಒಳಪಡಿಸಿದ್ದು, ಅನೇಕ ಔಷಧಗಳು ಪ್ರಮಾಣಿತ ಗುಣಮಟ್ಟ ಹೊಂದಿಲ್ಲ ಎಂದು ತಿಳಿದುಬಂದಿದೆ.