ಉತ್ತರಪ್ರದೇಶ : ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಹೃದಯಾಘಾತಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಸ್ವಲ್ಪ ಮೊದಲು ಚೆನ್ನಾಗಿ ಓಡಾಡಿಕೊಂಡಿದ್ದವರು ಹಠಾತ್ತನೆ ಹೃದಯಾಘಾತಕ್ಕೆ ಬಲಿಯಾಗುತ್ತಾರೆ. ಅಂತಹದ್ದೇ ಘಟನೆ ಇದೀಗ ಉತ್ತರಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಮೊರಾದಾಬಾದ್ ನ ಕತ್ ಘರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಚ್ ಪೇಡಾ ಪ್ರದೇಶವೊಂದರಲ್ಲಿ ವ್ಯಕ್ತಿಯೊಬ್ಬ ಬೈಕ್ ಓಡಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ. ಈ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜಾಲತಾಣದಲ್ಲಿ ಹರಿದಾಡುತ್ತಿದೆ.
ಸಿಸಿಟಿವಿ ದೃಶ್ಯದಲ್ಲಿ 22 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಬೈಕ್‌ನಲ್ಲಿ ಪ್ರಯಾಣಿಸುತ್ತಿರಬೇಕಾದರೆ ಹಠಾತ್ತನೆ ಹೃದಯಾಘಾತವಾಗಿ ಬೈಕ್ ಸಮೇತ ರಸ್ತೆಗೆ ಬಿದ್ದಿದ್ದಾನೆ. ಕೂಡಲೇ ಅಲ್ಲಿನ ಸ್ಥಳೀಯರು ಆತನ ಸಹಾಯಕ್ಕೆ ಮುಂದಾಗಿ ಸಿಪಿಆರ್ ನೀಡಿದ್ಧಾರೆ. ಜೊತೆಗೆ ಆಸ್ಪತ್ರೆಗೂ ಸಾಗಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಪರಿಶೀಲಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
मुरादाबाद में एक युवक का बाइक चलाते समय अचानक पड़ा दिल का दौरा मौके पर मौत pic.twitter.com/lgOVuAMWxe
— Priya singh (@priyarajputlive) April 23, 2025