ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಿಲುವಾಗಿಲು ಗ್ರಾಮದಲ್ಲಿ ನೇಣು ಬಿಗಿದುಕೊಂಡು ದ್ವಿತೀಯ ಪಿಯುಸಿ ವಿದ್ಯಾರ್ಥಿ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೃತನನ್ನ 17 ವರ್ಷದ ಸುಶಾಂತ್ ಎಂದು ಗುರುತಿಸಲಾಗಿದೆ. ಮೃತ ಸುಶಾಂತ್ ಹರಿಹರಪುರ ಹೋಬಳಿಯ ನಿಲುಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ತಾಳ್ ಗ್ರಾಮದ ನಿವಾಸಿ. ಕೊಪ್ಪ ಪಟ್ಟಣದ ಜಿಜೆಸಿ ಕಾಲೇಜಿನ ದ್ವಿತೀಯ ವರ್ಷದ ಪಿಯುಸಿ ವಿದ್ಯಾರ್ಥಿಯಾಗಿದ್ದ ಈತ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾನೆ. ಘಟನಾ ಸ್ಥಳಕ್ಕೆ ಹರಿಹರಪುರ ಪೊಲೀಸ್ ಠಾಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.