ಕಲಬುರ್ಗಿ : ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಆಂದೋಲಾ ಗ್ರಾಮದ ಮಠದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯನ್ನ ಹೊಲಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ.
ಸ್ಥಳೀಯ ಯುವಕರು ಈ ಕೃತ್ಯದ ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟ ಬೆನ್ನಲ್ಲೇ ಆರೋಪಿ ಮಸ್ತಾಕ್ ಹುಸೇನ್ ಎಂಬಾತ ಗ್ರಾಮದಿಂದ ಪರಾರಿಯಾಗಿದ್ದು, ಜೇವರ್ಗಿ ಸಿಡಿಪಿಓ ನೀಡಿದ ದೂರಿನನ್ವಯ ಪೊಲೀಸರು ಎಫ್‌ಐಆರ್ ದಾಖಲಿಸಿ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.








