ಯಾದಗಿರಿ : ಪತ್ನಿ ಮೇಲಿನ ಅನೈತಿಕ ಸಂಬಂಧದ ಶಂಕೆ ಯಿಂದ ಆಕ್ರೋಶಗೊಂಡಿದ್ದ ವ್ಯಕ್ತಿಯೊಬ್ಬ ತನ್ನ ಮೂವರು ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿದ್ದು, ಇಬ್ಬರು ಮಕ್ಕಳು ಸ್ಥಳದಲ್ಲೇ ಮೃತಪಟ್ಟು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿದೆ.
ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ದುಗನೂರ, 4 ವರ್ಷದ ಮಗಳು ಸ್ವಾನಿ ಮತ್ತು 3 ವರ್ಷದ ಮಗ ಭಾರ್ಗವನನ್ನು ಹತ್ಯೆ ಮಾಡಿದ್ದಾನೆ. 8 ವರ್ಷದ ಹೇಮಂತ ಗಾಯಗೊಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪರಾರಿಯಾಗಿರುವ ಆರೋಪಿ ಶರಣಪ್ಪನ ಬಂಧನಕ್ಕೆ ಪೊಲೀಸರು ಬಲೇ ಬೀಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪತ್ನಿಗೆ ಅಕ್ರಮ ಸಂಬಂಧವಿದೆ ಎಂದು ಅನುಮಾನ ಪಟ್ಟ ಪತಿ ತನ್ನ ಪುಟ್ಟ ಮಕ್ಕಳನ್ನು ಕೊಂದು ಪರಾರಿಯಾಗಿದ್ದಾನೆ. ಆರೋಪಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಯಾದಗಿರಿ ಎಸ್ ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







