ಬೆಂಗಳೂರು : ಬೆಂಗಳೂರಲ್ಲಿ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ, ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದಾನೆ ಎಂದು ಯುವಕನನ್ನು ಮಹಿಳೆಯ ಕುಟುಂಬಸ್ಥರು ಹತ್ಯೆ ಮಾಡಿದ ಘಟನೆ ಯಶವಂತಪುರದ ಮುತ್ಯಾಲಮ್ಮ ನಗರದಲ್ಲಿ ನಡೆದಿದೆ. ಮೃತ ಯುವಕನನ್ನನು ನರಸಿಂಹರಾಜು (32) ಎಂದು ತಿಳಿದುಬಂದಿದೆ.
ಈತ ಮದುವೆಯಾಗಿದ್ದ ಮಹಿಳೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಎನ್ನಲಾಗಿದೆ. ಆ ಮಹಿಳೆಯೂ ಆಗಾಗ ಯುವಕನ ಮನೆಗೆ ಬರುತ್ತಿದ್ದಳು. ಕಳೆದ ಶನಿವಾರ ಆ ಮಹಿಳೆ ನರಸಿಂಹರಾಜು ಮನೆಯಲ್ಲಿ ಇದ್ದರು. ಇದನ್ನು ತಿಳಿದ ಮಹಿಳೆಯ ಮನೆಯವರು ಬಂದಿದ್ದಾರೆ. ಬಳಿಕ ಮನೆಯಲ್ಲಿದ್ದ ನರಸಿಂಹರಾಜುನನ್ನು ಮನೆಯಿಂದ ಹೊರಗಡೆ ಎಳೆದುಕೊಂಡು ಬಂದು ರಸ್ತೆಯಲ್ಲಿ ನಾಲ್ಕೈದು ಜನ ಮನಸ್ಸೋ ಇಚ್ಚೆ ಹಲ್ಲೆ ನಡೆಸಿದ್ದಾರೆ. ಈ ವೇಳೆ ಬಿಡಿಸಲು ಬಂದ ನರಸಿಂಹರಾಜು ತಾಯಿಯ ಮೇಲೂ ಹಲ್ಲೆ ಮಾಡಲಾಗಿದೆ.
ಹಲ್ಲೆಯಿಂದ ಅಸ್ವಸ್ಥನಾಗಿದ್ದ ನರಸಿಂಹರಾಜುನನ್ನು ಕೂಡಲೇ ಕೆ.ಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದರು. ಆಸ್ಪತ್ರೆಯಲ್ಲಿ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ ಎಂದು ಕುಟುಂಬಸ್ಥರ ಆಕ್ರೋಶ ಹೊರಹಾಕಿದ್ದಾರೆ.








