ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು ಬಂದು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲೇ ಚಾಲಕ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಹೃದಯಾಘಾತದಿಂದ ನಿನ್ನೆ ಒಂದೇ ದಿನ 5 ಜನರು ಬಲಿಯಾಗಿದ್ದಾರೆ. ಕೊಪ್ಪಳದಲ್ಲಿ 26ರ ಯುವತಿ, ಸವಣೂರಲ್ಲಿ 25ರ ಯುವಕ ಸೇರಿ ನಿನ್ನೆ 5 ಜನ ಹೃದಯಾ ಘಾತಕ್ಕೆ ಬಲಿಯಾಗಿದ್ದಾರೆ.
ಕೊಪ್ಪಳದ 26 ವರ್ಷದ ಮಹಿಳೆ ಮಂಜುಳಾ ಹೂಗಾರ(26) ಹೃದಯಾಘಾತದಿಂದಬುಧವಾರಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (37), ಮಂಡ್ಯದ ಪಾಂಡವಪುರ ತಾಲೂಕಿನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು ಮೀಸಿ (63) ಎಂಬುವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.