ಬೆಂಗಳೂರು : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಬೆಂಗಳೂರಿನ ಬಸವೇಶ್ವರ ನಗರದ ಭೋವಿ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಮಗಳನ್ನು ಮದುವೆ ಮಾಡಿಕೊಡದಿದ್ದಕ್ಕೆ ಮಹಿಳೆಗೆ ಪೆಟ್ರೋಲ್ ಸುರಿದು ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ್ದಾನೆ. ನಿನ್ನೆ ಮಧ್ಯರಾತ್ರಿ 1 ಗಂಟೆಗೆ ಗೀತಾ ಎಂಬ ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ.
19 ವರ್ಷದ ಮಗಳನ್ನು ಮದುವೆ ಮಾಡಿಕೊಡುವಂತೆ ಪೀಡಿಸುತ್ತಿದ್ದ ವ್ಯಕ್ತಿ, ಯುವತಿ ತಾಯಿ ಒಪ್ಪದಿರುವುದಕ್ಕೆ ಸಿಟ್ಟಿಗೆದ್ದು ಮಹಿಳೆಗೆ ಬೆಂಕಿ ಹಚ್ಚಿದ್ದಾನೆ.ಶೇ.50 ರಷ್ಟು ಗಾಯಗೊಂಡ ಗೀತಾ ಸ್ಥಿತಿ ಗಂಭೀರವಾಗಿದೆ. ಸದ್ಯ ಗೀತಾರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.







