ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಮಹಿಳೆಗೆ ಖಾಸಗಿ ಅಂಗ ತೋರಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಇಂದಿರಾನಗರದಲ್ಲಿ ಈ ಒಂದು ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಯುವತಿಯ ದೂರಿನ ಅನ್ವಯ ಅಪರಿಚಿತನ ವಿರುದ್ಧ ಇದೀಗ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಾಗಿದೆ.ಸದ್ಯ ಆರೋಪಿಗಾಗಿ ಇಂದಿರಾನಗರ ಠಾಣೆ ಪೊಲೀಸ್ರು ಇದೀಗ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
		







