ಮಂಡ್ಯ : ಮಂಡ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಹೆಲ್ಮೆಟ್ ತಪಾಸಣೆಗಾಗಿ ಪೊಲೀಸರು ಬೈಕ್ ಅಡ್ಡಗಟ್ಟುತ್ತಿದ್ದಂತೆ ಬೈಕ್ ಸವಾರ ಬಿದ್ದ ವೇಳೆ ತಲೆಗೆ ತೀವ್ರ ಪೆಟ್ಟು ಬಿದ್ದು ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮದ್ದೂರು ತಾಲೂಕಿನ ಗೊರವನಹಳ್ಳಿ ಗ್ರಾಮದ ವಾಣಿ-ಅಶೋಕ್ ದಂಪತಿಯ ಮೂರುವರೆ ವರ್ಷದ ಮಗು ಹೃತೀಕ್ಷಳಿಗೆ ನಾಯಿ ಕಡಿದೆ ಎಂದು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಸಂಚಾರಿ ಪೊಲೀಸರು ಹೆಲ್ಮೆಟ್ ತಪಾಸಣೆ ವೇಳೆ ಆಯತಪ್ಪಿ ಬೈಕ್ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.
ಘಟನೆ ಮಂಡ್ಯದ ನಂದ ಸರ್ಕಲ್ ಬಳಿ ಹೆಲ್ಮೆಟ್ ತಪಾಸಣೆಗಾಗಿ ಸಂಚಾರಿ ಪೊಲೀಸರು ಬೈಕ್ ನಲ್ಲಿ ಬರುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿದ್ದಾರೆ. ಏಕಾಏಕಿ ಬ್ರೇಕ್ ಹಾಕುತ್ತಿದ್ದಂತೆ ಬೈಕ್ ಸವಾರ ಆಯತಪ್ಪಿ ಕೆಳಗೆ ಬೀದ್ದಿದ್ದಾನೆ. ಬೈಕ್ ನಲ್ಲಿದ್ದ ಆತನ ಪತ್ನಿ ಹಾಗೂ ಮಗು ಕೂಡ ಕೆಳಗೆ ಬಿದ್ದಿದ್ದು, ಮಗುವಿನ ತಲೆ ನೆಲಕ್ಕೆ ಅಪ್ಪಳಿಸಿದ ಪರಿಣಾಮ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಘಟನೆಯನ್ನು ಕಣ್ಣಾರೆ ಕಂಡ ಸಾರ್ವಜನಿಕರು ಆಘಾತಗೊಂಡಿದ್ದಾರೆ.