ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಮಹಿಳೆಯ ತಲೆಕೂದಲು ಕತ್ತರಿಸಿ ಅರೆನಗ್ನಗೊಳಿಸಿ ಖಾರ ಎರಚಿ ವಿಕೃತ ಹಿಂಸೆ ನೀಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕಿನ ತಾಂಡಾವೊಂದರಲ್ಲಿ ಅನೈತಿಕ ಸಂಬಂಧದ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಆಕೆಯ ಸಂಬಂಧಿಕರು, ತಲೆಗೂದಲು ಕತ್ತರಿಸಿ, ಸುಣ್ಣ ಹಚ್ಚಿ, ಕಾರದ ಪುಡಿ ಎರಚಿದ್ದಲ್ಲದೆ, ಬಟ್ಟೆ ಹರಿದು ಅರೆನಗ್ನವಾಗಿಸಿ ಕೊಲೆಗೆ ಯತ್ನಿಸಿದ ಅಮಾನವೀಯ ಕೃತ್ಯ ನಡೆದಿದೆ.
ಈ ಬಗ್ಗೆ ಕೆಂಭಾವಿ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಎಂದು ತಿಳಿದುಬಂದಿದೆ.
 
		



 




