Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

BIG NEWS : ಆಹಾರ ಉದ್ಯಮಗಳಲ್ಲಿ ತುಕ್ಕು ಹಿಡಿದ ಕತ್ತರಿ, ಚಾಕುಗಳ ಬಳಕೆಗೆ ನಿಷೇಧ : `FSSAI’ ಖಡಕ್ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!
INDIA

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

By kannadanewsnow57

ಠಾಣೆ (ಮಹಾರಾಷ್ಟ್ರ): ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಅಂಬರನಾಥ್‌ನಲ್ಲಿ ಭೀಕರ ಘಟನೆಯೊಂದು ಬೆಳಕಿಗೆ ಬಂದಿದೆ. ಮದುವೆಯಾಗಿ ಕೇವಲ 48 ದಿನಗಳಾಗಿದ್ದ 26 ವರ್ಷದ ವಿಶಾಖಾ ತಿಲ್ಕರ್ ಎಂಬ ನವವಿವಾಹಿತೆ ಕೌಟುಂಬಿಕ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಏಪ್ರಿಲ್ 30 ರಂದು ವಿಶಾಖಾ ಅವರ ವಿವಾಹ ಡಾ. ನಿತಿನ್ ತಿಲ್ಕರ್ ಎಂಬಾತನೊಂದಿಗೆ ನಡೆದಿತ್ತು. ಮದುವೆಗೆ ಮುಂಚೆ ಎಲ್ಲವೂ ಸಾಮಾನ್ಯವಾಗಿಯೇ ಇತ್ತು, ಆದರೆ ಮದುವೆಯಾದ ಕೆಲವೇ ದಿನಗಳಲ್ಲಿ ಅತ್ತೆಯ ಮನೆಯವರ ನಡವಳಿಕೆ ಸಂಪೂರ್ಣ ಬದಲಾಯಿತು ಎಂದು ವಿಶಾಖಾ ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ವಿಶಾಖಾ ಅವರಿಗೆ ತವರು ಮನೆಯಿಂದ ಹಣ, ಒಡವೆ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ತರುವಂತೆ ನಿರಂತರವಾಗಿ ಒತ್ತಡ ಹೇರಲಾಗುತ್ತಿತ್ತು ಎನ್ನಲಾಗಿದೆ.

ಮನೆಯ ಸುತ್ತಲೂ ಸಿಸಿಟಿವಿ ಕಣ್ಗಾವಲು!
ಪತಿ ನಿತಿನ್ ತಿಲ್ಕರ್ ಪತ್ನಿಯ ಪ್ರತಿಯೊಂದು ಚಟುವಟಿಕೆಯ ಮೇಲೆ ನಿಗಾ ಇಡಲು ಮನೆಯ ಒಳಗಡೆ ಮತ್ತು ಹೊರಗಡೆ ಹಲವು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದ ಎಂದು ವಿಶಾಖಾ ಪೋಷಕರು ತಿಳಿಸಿದ್ದಾರೆ. ಇದರಿಂದಾಗಿ ಆಕೆಯ ವೈಯಕ್ತಿಕ ಸ್ವಾತಂತ್ರ್ಯ ಸಂಪೂರ್ಣವಾಗಿ ಹರಣವಾಗಿತ್ತು. ಅಷ್ಟೇ ಅಲ್ಲದೆ, ವಿಶಾಖಾ ನೆರೆಹೊರೆಯವರೊಂದಿಗೆ ಅಥವಾ ಯಾವುದೇ ಅಪರಿಚಿತರೊಂದಿಗೆ ಮಾತನಾಡಿದರೂ, ಆಕೆ ಮನೆಗೆ ಮರಳಿದ ತಕ್ಷಣ ತೀವ್ರವಾಗಿ ಥಳಿಸಲಾಗುತ್ತಿತ್ತು. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಎರಡು ದಿನಗಳ ಮುಂಚೆಯೂ ನೆರೆಹೊರೆಯವರ ಜೊತೆ ಮಾತನಾಡಿದ್ದಾಳೆಂಬ ಕಾರಣಕ್ಕೆ ವಿಶಾಖಾಳನ್ನು ಕ್ರೂರವಾಗಿ ಥಳಿಸಲಾಗಿತ್ತು ಎಂದು ತಿಳಿದುಬಂದಿದೆ.

ಆರೋಪಿ ಪತಿ ಬಂಧನ
ನಿರಂತರವಾಗಿ ನಡೆಯುತ್ತಿದ್ದ ಮಾನಸಿಕ ಮತ್ತು ದೈಹಿಕ ಕಿರುಕುಳದಿಂದ ವಿಶಾಖಾ ಸಂಪೂರ್ಣವಾಗಿ ನೊಂದಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅವರು ತಮ್ಮ ತಾಯಿಗೆ ಕರೆ ಮಾಡಿ ಅತ್ತೆ ಮನೆಯಲ್ಲಿ ತಮಗಾಗುತ್ತಿರುವ ದೌರ್ಜನ್ಯ ಮತ್ತು ಪಡುತ್ತಿರುವ ಯಾತನೆಯ ಬಗ್ಗೆ ವಿವರಿಸಿದ್ದರು. ವಿಷಯ ತಿಳಿದ ತಕ್ಷಣ ಪೋಷಕರು ಆಕೆಯನ್ನು ಮರಳಿ ಮನೆಗೆ ಕರೆತರಲು ಸಿದ್ಧತೆ ನಡೆಸುತ್ತಿದ್ದರು. ಆದರೆ ಅಷ್ಟರಲ್ಲೇ ವಿಶಾಖಾ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಸುದ್ದಿ ಬಂದಿದೆ.

ಪೊಲೀಸ್ ಕ್ರಮ: ಈ ಘಟನೆಗೆ ಸಂಬಂಧಿಸಿದಂತೆ ಅಂಬರನಾಥ್‌ನ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪತಿ ನಿತಿನ್ ತಿಲ್ಕರ್, ಅತ್ತೆ ಛಾಯಾ ತಿಲ್ಕರ್ ಮತ್ತು ಮೈದುನ ನಿನಾದ್ ತಿಲ್ಕರ್ ವಿರುದ್ಧ ಗೃಹಹಿಂಸೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಾಗಿದೆ. ಪೊಲೀಸರು ಮುಖ್ಯ ಆರೋಪಿ ಡಾ. ನಿತಿನ್ ತಿಲ್ಕರ್‌ನನ್ನು ಈಗಾಗಲೇ ಬಂಧಿಸಿದ್ದು, ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

SHOCKING: Sinful husband installed CCTV outside the house and in the bedroom: Newlywed commits suicide within 48 days of marriage!
Share. Facebook Twitter LinkedIn WhatsApp Email

Related Posts

BIG NEWS : ಆಹಾರ ಉದ್ಯಮಗಳಲ್ಲಿ ತುಕ್ಕು ಹಿಡಿದ ಕತ್ತರಿ, ಚಾಕುಗಳ ಬಳಕೆಗೆ ನಿಷೇಧ : `FSSAI’ ಖಡಕ್ ಆದೇಶ

2 Mins Read

BREAKING : `ICAI CA’ ಫೈನಲ್ ಪರೀಕ್ಷೆ ಫಲಿತಾಂಶ ಪ್ರಕಟ :ಶೇ. 83.17 ಅಂಕಗಳೊಂದಿಗೆ ಪಟಿಯಾಲದ ನೂರ್ ಸಿಂಗ್ಲಾ ದೇಶಕ್ಕೇ ಮೊದಲ ರ‍್ಯಾಂಕ್!

2 Mins Read

BREAKING : `ICAI CA’ ಫೈನಲ್ ಪರೀಕ್ಷೆ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಚೆಕ್ ಮಾಡಿಕೊಳ್ಳಿ | ICAI CA result

2 Mins Read
Recent News

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

BIG NEWS : ಆಹಾರ ಉದ್ಯಮಗಳಲ್ಲಿ ತುಕ್ಕು ಹಿಡಿದ ಕತ್ತರಿ, ಚಾಕುಗಳ ಬಳಕೆಗೆ ನಿಷೇಧ : `FSSAI’ ಖಡಕ್ ಆದೇಶ

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

State News
KARNATAKA

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

By ಸುರೇಶ್‌ KARNATAKA 2 Mins Read

ಬೆಂಗಳೂರು: ರಾಜಧಾನಿಯ ವಿಧಾನಸೌಧದಲ್ಲಿ ಇಂದು ನಡೆದ ವಿಧಾನ ಪರಿಷತ್ ಚುನಾವಣೆಯು ತೀವ್ರ ರಾಜಕೀಯ ಜಿದ್ದಾಜಿದ್ದಿಗೆ ಸಾಕ್ಷಿಯಾಗಿದೆ. ಕಾಂಗ್ರೆಸ್‌ನ 5, ಬಿಜೆಪಿಯ…

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

ಕಂಪನಿಯಿಂದ ಕಾರಣವಿಲ್ಲದೆ ಕೆಲಸದಿಂದ ತೆಗೆದುಹಾಕಿದರೆ ಚಿಂತಿಸಬೇಡಿ : ನಿಮ್ಮ ನೆರವಿಗೆ ಬರಲಿದೆ ಸರ್ಕಾರದ ಈ ಆ್ಯಪ್!

BREAKING : MLC ಚುನಾವಣೆ : ಮಾಕ್ ವೋಟಿಂಗ್ ನಲ್ಲಿ ಕಾಂಗ್ರೆಸ್ ಶಾಸಕರ ಒಟ್ಟು 19 ಮತ ಲ್ಯಾಪ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.