ಧಾರವಾಡ : ಇತ್ತೀಚಿನ ಮಕ್ಕಳ ಮನಸ್ಸು ಎಷ್ಟು ಸೂಕ್ಷ್ಮವಾಗಿದೆ ಎಂದರೆ, ಸ್ವಲ್ಪ ಗದರಿದರೂ ಸಾಕು ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುತ್ತಾರೆ. ಇದೀಗ ಧಾರವಾಡದಲ್ಲಿ ಅಂತಹ ಘಟನೆ ನಡೆದಿದ್ದು, ತಂದೆ ಒಬ್ಬರು ತಮ್ಮ ಮಗನಿಗೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಧಾರವಾಡ ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.
ಶಿವಳ್ಳಿ ಗ್ರಾಮದ ವಿನಯ್ ಹಡಪದ (16) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಮಗನಿಗೆ ಬುದ್ಧಿವಾದ ಹೇಳಿದ್ದ. ಆದರೆ, ತಂದೆ ಬುದ್ಧಿವಾದ ಹೇಳಿದ್ದನ್ನೇ ನೆಪವಾಗಿಟ್ಟುಕೊಂಡು ಮಗ ವಿನಯ್ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಡುಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸದ್ಯ ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.