ದಕ್ಷಿಣ ಕನ್ನಡ : ಆಟ ಆಡುವಾಗ ಎದೆನೋವಿನಿಂದ ಕುಸಿದು ಬಿದ್ದ ಎಸ್ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಜೋಡುಸ್ಥಾನದಲ್ಲಿ ನಡೆದಿದೆ.
ಜೋಡುಸ್ಥಾನದ ಪ್ರಥಮ್ (16) ಮೃತ ಬಾಲಕನಾಗಿದ್ದು, ಭಾನುವಾರ ಮಧ್ಯಾಹ್ನ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬಾಲಕ ಮೃತಪಟ್ಟಿದ್ದಾನೆ.