ಶಿವಮೊಗ್ಗ : ರಾಜ್ಯದಲ್ಲಿ ಮತ್ತೊಂದು ಘೋರ ಘಟನೆಯೊಂದು ನಡೆದಿದ್ದು, ಪೋಷಕರು ಮೊಬೈಲ್ ನೋಡಬೇಡ ಎಂದಿದ್ದಕ್ಕೆ ಮನನವೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಯುವತಿ ಧನುಶ್ರೀಗೆ ಪೋಷಕರು ಹೆಚ್ಚು ಮೊಬೈಲ್ ನೋಡಬೇಡ ಎಂದು ಬುದ್ದಿಮಾತು ಹೇಳಿದಕ್ಕೆ ಮನನೊಂದು ಕಳೆದ 3 ದಿನಗಳ ಹಿಂದೆ ವಿಷ ಸೇವಿಸಿದ್ದರು. ಕೂಡಲೇ ಪೋಷಕರು ಧನುಶ್ರೀಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.
ಕಳೆದ ಮೂರು ದಿನಗಳಿಂದ ವಿದ್ಯಾರ್ಥಿನಿ ಧನುಶ್ರೀಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಧನುಶ್ರೀ ಮೃತಪಟ್ಟಿದ್ದಾಳೆ.