ಭೋಪಾಲ್: ತರಗತಿಯಲ್ಲಿ ಬೈದಿದಕ್ಕೆ ವಿದ್ಯಾರ್ಥಿಯೊಬ್ಬ ಕಾಲೇಜಿನ ಪ್ರಾಂಶಪಾಲರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಧಮೋರಾ ಸರ್ಕಾರಿ ಪ್ರೌಢಶಾಲೆಯಲ್ಲಿ ಈ ದುಷ್ಕೃತ್ಯ ನಡೆದಿದೆ.
ಪೊಲೀಸ್ ಇನ್ಸ್‌ಪೆಕ್ಟರ್ ಪುಷ್ಪೇಂದ್ರ ಯಾದವ್ ಪ್ರಕಾರ, ಪ್ರಾಂಶುಪಾಲ ಎಸ್‌ಕೆ ಸಕ್ಸೇನಾ (55) ಈ ಹಿಂದೆ 12 ನೇ ತರಗತಿಯ ವಿದ್ಯಾರ್ಥಿ (17) ಅನುಚಿತವಾಗಿ ವರ್ತಿಸಿದ್ದಕ್ಕಾಗಿ ಛೀಮಾರಿ ಹಾಕಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿ ಶುಕ್ರವಾರ ಶಾಲೆಗೆ ಗೈರು ಹಾಜರಾಗಿದ್ದ. ಬಳಿಕ ದೇಶಿ ನಿರ್ಮಿತ ಬಂದೂಕಿನಿಂದ ತಲೆಗೆ ಗುಂಡು ಹಾರಿಸಿದ್ದಾನೆ. ಪ್ರಾಂಶುಪಾಲರು ಸ್ಥಳದಲ್ಲೇ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.
ಆರೋಪಿ ತನ್ನ ಸ್ಕೂಟರ್‌ನಲ್ಲಿ ಪರಾರಿಯಾಗಿದ್ದಾನೆ. ಉತ್ತರ ಪ್ರದೇಶದ ಗಡಿಯಲ್ಲಿ ಅಪ್ರಾಪ್ತ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.