ಬೆಳಗಾವಿ : ಇತ್ತೀಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಸಹಜ ಕಾಯಿಲೆಯಾಗಿಬಿಟ್ಟಿದೆ. ಇದೀಗ ತರಗತಿಯಲ್ಲಿ ಪಾಠ ಮಾಡುತ್ತಿರುವಾಗಲೇ ಶಿಕ್ಷಕರೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದಲ್ಲಿ ನಡೆದಿದೆ.
ಅಥಣಿ ತಾಲೂಕಿನ ಐಗಳಿ ಗ್ರಾಮದ ತೆಲಸಂಗ ವಸತಿ ತೋಟದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರತ ಶಿಕ್ಷಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.ಮೃತ ಶಿಕ್ಷಕರನ್ನು ಭೈರಪ್ಪ ಆರ್ ಸಾತಗೊಂಡನವರ (55) ಎಂದು ತಿಳಿದುಬಂದಿದೆ.