ಮೈಸೂರು : ಮೈಸೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೈಕ್ ಓಡಿಸುವಾಗ ಹೃದಯಾಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಹೃದಯಾಘಾತವಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರಿನ ಬೋಗಾದಿ ರಿಂಗ್ ರಸ್ತೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಚಾಮರಾಜನಗರ ತಾಲೂಕಿನ ನಂಜೆದೇವರಪುರದ ರವಿ ಎಂದು ಗುರುತಿಸಲಾಗಿದೆ.
ಬೈಕ್ ಓಡಿಸಿಕೊಂಡು ಬರುತ್ತಿದ್ದ ವೇಳೆ ಏಕಏಕಿ ಹೃದಯಾಘಾತವಾಗಿದ್ದು, ಬೈಕ್ ಸವಾರ ಕೆಳಗೆ ಬೀಳುತ್ತಿರುವ ದೃಶ್ಯ ಸಿಸಿಟಿಯಿಯಲ್ಲಿ ಸೆರೆಯಾಗಿದೆ. ಬೈಕ್ ಸವಾರನಿಗೆ ಹಾರ್ಟ್ ಅಟ್ಯಾಕ್ ಆಗುತ್ತಿದ್ದಂತೆ ನಿಯಂತ್ರಣ ತಪ್ಪಿದ ಬೈಕ್, ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಬೈಕ್ ಸವಾರ ರವಿ ಮೃತಪಟ್ಟಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.