ಬೆಂಗಳೂರು : ಬೆಂಗಳೂರಿನಲ್ಲಿ ಹಾಲಿನ ಕಳ್ಳರ ಹಾವಳಿ ಹೆಚ್ಚಾಗಿದ್ದು, ಬೈಕ್ ನಲ್ಲಿ ಬಂದು ಮುಂಜಾನೆ ಹಾಲು ಕಳ್ಳತನ ಮಾಡಿ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಬೂತ್ ಒಂದರಲ್ಲಿ ಹಾಲಿನ ಪ್ಯಾಕೆಟ್ಗಳನ್ನು ಕಳ್ಳತನ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಳಗಿನ ಜಾವ ಹಾಲಿನ ಕ್ರೇಟ್ ಇಳಿಸಿದ ಬಳಿಕ ಎಂಟ್ರಿ ಕೊಡುವ ಕಳ್ಳರು ಬೆಳಗಿನ ಜಾವ 4 ಗಂಟೆಯಿಂದ 5 ಗಂಟೆ ಸಮಯದಲ್ಲಿ ಹಾಲು ಕದ್ದು ಎಸ್ಕೇಪ್ ಆಗಿದ್ದಾರೆ.
ಒಂದೇ ಸ್ಕೂಟರ್ ನಲ್ಲಿ ಹೆಲ್ಮೆಟ್ ಇಲ್ಲದೇ ಬಂದ ಯುವಕರು ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದಾರೆ. ಸದ್ಯ ಹಾಲು ಕಳ್ಳತನದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕಳ್ಳರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.