ಬೆಂಗಳೂರು : ಬೆತ್ತಲೆ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿದ್ದಕ್ಕೆ ಹೆದರಿ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಸರುಘಟ್ಟ ರಸ್ತೆಯ ಶಾಂತಿನಗರದಲ್ಲಿ ನಡೆದಿದೆ. ಕೇರಳ ಮೂಲದ ಜಗನ್ ಮೋಹನ್ (25) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.
ಖಾಸಗಿ ಕಾಲೇಜಿನಲ್ಲಿ ಎಂಬಿಎ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಕಾಲೇಜು ಸಮೀಪದಲ್ಲಿರುವ ಶಾಂತಿನಗರದಲ್ಲಿ ರೂಂ ಬಾಡಿಗೆ ಪಡೆದು ವಾಸವಿದ್ದ. ಡೆತ್‌ನೋಟ್ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳದಲ್ಲಿ ಪತ್ತೆಯಾದ ಡೆತ್‌ನೋಟ್‌ನಲ್ಲಿ ಮೃತ ವಿದ್ಯಾರ್ಥಿ ಮೂರು ನಂಬರ್ ಬರೆದಿದ್ದಾನೆ.
ಪರಿಶೀಲನೆ ನಡೆಸಿದಾಗ ಫೇಕ್ ವಿಡಿಯೋ ಕಾಲ್‌ನಲ್ಲಿ ಹಣ ಕಳೆದುಕೊಂಡಿರುವ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿದ್ದು, 25,000 ರೂ. ವರ್ಗಾವಣೆ ಮಾಡಿರುವುದು ಗೊತ್ತಾಗಿದೆ. ಜೊತೆಗೆ ಬೆತ್ತಲೆ ಫೋಟೋ ಹಾಗೂ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.








