ಬೆಂಗಳೂರು : ರೀಲ್ಸ್ ಹುಚ್ಚಿಗೆ ಮತ್ತೆ ಮೂವರು ಬಲಿಯಾಗಿರುವ ಘಠನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೊರವಲಯದ ಸಿದ್ದೆನಾಯನಹಳ್ಳಿ ರೈಲ್ವೆ ಹಳಿ ಬಳಿ ನಡೆದಿದೆ.
ಹೌದು, ರೀಲ್ಸ್ ಮಾಡುವಾಗ ರೈಲು ಡಿಕ್ಕಿ ಹೊಡೆದು ಉತ್ತರ ಪ್ರದೇಶ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತರನ್ನು ರಾಹುಲ್ (18), ಬಿಕೇಶ್ (20) ಮತ್ತು ಲಲನ್ (24) ಎಂದು ಗುರುತಿಸಲಾಗಿದೆ.
ಮೃತ ಯುವಕರು ಕಾರ್ಪೆಂಟರ್ ಕೆಲಸ ಮಾಡುತ್ತಿದ್ದರು. ಸಂಜೆ ಕೆಲಸ ಮುಗಿಸಿಕೊಂಡು ರೈಲ್ವೆ ಹಳಿ ಬಳಿ ಬಂದು ರೀಲ್ಸ್ ಮಾಡುತ್ತಿದ್ದಾಗ ರೈಲು ಡಿಕ್ಕಿಯಾಗಿ ಯುವಕರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಯಶವಂತಪುರ ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.