ಯಾದಗಿರಿ : ಇತ್ತೀಚಿಗೆ ಶಾಲಾ ಬಸ್ ಹರಿದು ಬೆಂಗಳೂರಿನಲ್ಲಿ ಇಬ್ಬರು ಕಂದಮ್ಮಗಳು ಬಲಿಯಾಗಿದ್ದರು. ಇದೀಗ ಯಾದಗಿರಿಯಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು ಖಾಸಗಿ ಶಾಲಾ ಬಸ್ ಹರಿದು 4 ವರ್ಷದ ಮಗು ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಗಾಜರಕೋಟದಲ್ಲಿ ನಡೆದಿದೆ.
ನಿನ್ನೆ ಈ ಒಂದು ಘಟನೆ ನಡೆದಿದ್ದು ಬಸ್ನಿಂದ ಕೆಳಗೆ ಇಳಿಯುತ್ತಿದ್ದಂತೆ ಶಾಲಾ ಬಸ್ ಚಾಲಕ ಬಸ್ ರಿವರ್ಸ್ ತೆಗೆದುಕೊಂಡಿದ್ದಾನೆ. ಈ ವೇಳೆ ಬಸ್ಸಿನ ಚಕ್ರಕ್ಕೆ ಸಿಲುಕಿ 4 ವರ್ಷದ ಪುನೀತ್ ಎಂಬ ಬಾಲಕ ಸಾವನಪ್ಪಿದ್ದಾನೆ. ಗಾಜರ್ ಕೋಟ ಗ್ರಾಮದ ವಿಸಡಂ ಶಾಲೆಯ ವಿದ್ಯಾರ್ಥಿ ಪುನೀತ್ ಸಾವನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಇದೀಗ ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.
ಗ್ರಾಮಸ್ಥರು ಮಗುವಿನ ಶವ ಇಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್ ಚಾಲಕನಿಗೆ ಜೀವಾವಧಿ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಪೊಲೀಸರ ಮನವೊಲಿಕೆಯ ಬಳಿಕ ಪ್ರತಿಭಟನೆ ಕೈಬಿಟ್ಟರು. ಗುರುಮಠಕಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.








