ಕಲಬುರ್ಗಿ : ಕಲ್ಬುರ್ಗಿಯಲ್ಲಿ ಘೋರವಾದಂತಹ ದುರಂತ ಸಂಭವಿಸಿದ್ದು, ಆಟವಾಡುತ್ತಿದ್ದಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳು ಸಾವನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಮೃತ ಮಕ್ಕಳನ್ನು ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್ (2) ಎಂದು ತಿಳಿದುಬಂದಿದೆ. ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರು ಮಕ್ಕಳು ಸಿಕ್ಕಿರಲಿಲ್ಲ.
ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ ಮಕ್ಕಳು ಬಿದ್ದಿರುವುದು ಗೊತ್ತಾಗಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.