ದಾವಣಗೆರೆ : ದಾವಣಗೆರೆಯಲ್ಲಿ ಮನೆಯಲ್ಲಿದ್ದ ಯುಪಿಎಸ್ ಸ್ಪೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆಯ ಕಾಯಿಪೇಟೆಯಲ್ಲಿ ಯುಪಿಎಸ್ ಸ್ಪೋಟಗೊಂಡ ಪರಿಣಾಮ ಅಗ್ನಿಅವಘಡ ಸಂಭವಿಸಿದ್ದು, ಈ ದುರಂತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ವಿಮಾ ಮತ್ತು ಕುಮಾರ್ ಎಂದು ಗುರುತಿಸಲಾಗಿದೆ. ಬಿಜೆಪಿ ಮುಖಂಡ ರುದ್ರಮುನಿಸ್ವಾಮಿ ಹಿರೇಮಠ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ. ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.