ವಿಜಯಪುರ : ಕಳೆದ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಒಂದೇ ದಿನಕ್ಕೆ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದರು. ಇದೀಗ ವಿಜಯಪುರದಲ್ಲಿ ಕೂಡ ಹೃದಯಾಘಾತದಿಂದ ಯುವಕನೊರ್ವ ಸಾವನ್ನಪ್ಪಿದ್ದಾನೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಲೆ ಕುಸಿದು ಬಿದ್ದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ವಿಜಯಪುರದ ಚಪ್ಪರಬಂದ ಕಾಲೋನಿಯಲ್ಲಿ ನಡೆದಿದೆ.
ಹೌದು ಡ್ಯಾನ್ಸ್ ಮಾಡುತ್ತಿದ್ದಾಗಲೇ ಯುವಕನಿಗೆ ಹಾರ್ಟ್ ಅಟ್ಯಾಕ್ ಆಗಿದೆ. 28 ವರ್ಷದ ಯುವಕ ಇದೀಗ ಹೃದಯಾಘಾತದಿಂದ ಸಾವನಪ್ಪಿದ್ದಾನೆ. ವಿಜಯಪುರದ ಚಪ್ಪರ ಬಂದ ಕಾಲೋನಿಯಲ್ಲಿ ಈ ಒಂದು ದುರಂತ ನಡೆದಿದೆ. ಮದುವೆಯಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗಲೇ ಮೊಹಮದ್ ಪೈಗಂಬರ್ ಗಂಗನಹಳ್ಳಿ (28) ಎಂಬ ಯುವಕ ಸಾವನ್ನಪ್ಪಿದ್ದಾನೆ. ಎಲ್ಲರ ಎದುರೇ ಕುಸಿದು ಬಿದ್ದು ಮೊಹಮ್ಮದ್ ಸಾವನಪ್ಪಿದ್ದಾನೆ. ಮೃತ ಮೊಹಮ್ಮದ್ ಅಲ್ಯೂಮಿನಿಯಂ ವರ್ಕ್ಸ್ ಕೆಲಸ ಮಾಡುತ್ತಿದ್ದ. ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.