ಬೆಂಗಳೂರು : ಸಾಮಾನ್ಯವಾಗಿ ರೈಲ್ವೆ ಟ್ರ್ಯಾಕ್ ದಾಟುವಾಗ ಆದಷ್ಟು ಎಚ್ಚರದಿಂದ ಇರಬೇಕು. ಇದೀಗ ಬೆಂಗಳೂರಿನಲ್ಲಿ ರೈಲ್ವೆ ಟ್ರ್ಯಾಕ್ ದಾಟುವ ವೇಳೆ ವಿದ್ಯಾರ್ಥಿ ಒಬ್ಬ ಮ್ಯೂಸಿಕ್ ಹಾಕಿಕೊಂಡು ದಾಟುತ್ತಿದ್ದಗ ಗೂಡ್ಸ್ ಟ್ರೈನ್ ಬಂದಿದ್ದು ಆತನಿಗೆ ಗೊತ್ತಾಗಿಲ್ಲ. ಈ ವೇಳೆ ಗೂಡ್ಸ್ ಟ್ರೈನ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಹೌದು ಬೆಂಗಳೂರಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಗೂಡ್ಸ್ ಟ್ರೈನ್ ಡಿಕ್ಕಿಯಾಗಿ ಸ್ಥಳದಲ್ಲೇ ವಿದ್ಯಾರ್ಥಿ ಒಬ್ಬ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನಾಗೇನಹಳ್ಳಿ ರೈಲ್ವೆ ಟ್ರ್ಯಾಕ್ ಬಳಿ ಒಂದು ಘಟನೆ ಸಂಭವಿಸಿದೆ. ಮ್ಯೂಸಿಕ್ ಕೇಳಿಕೊಂಡು ರೈಲ್ವೆ ಹಳಿ ದಾಟುತ್ತಿದ್ದಾಗ ಈ ಒಂದು ಅಪಘಾತ ಸಂಭವಿಸಿದೆ.
ಖಾಸಗಿ ಕಾಲೇಜಿನ ವಿದ್ಯಾರ್ಥಿ ಶಶಿಕುಮಾರ್ ಸ್ಥಳದಲ್ಲೇ ಸಾವನಪ್ಪಿದ್ದಾನೆ.ನಾಗೇನಹಳ್ಳಿ ಇಂದ ಪಾಳ್ಯ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ