ದಾವಣಗೆರೆ : ಇಂಜೆಕ್ಷನ್ ಮಾಡಿಸಿಕೊಂಡ ಕೆಲವೇ ಕ್ಷಣಗಳಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಮಾಡಿಸಿಕೊಂಡ ಕೆಲವೇ ಕ್ಷಣಗಳಲ್ಲಿ ತಿಪ್ಪಗೊಂಡನಹಳ್ಳಿ ಅನುಷಾ (35) ಸಾವನ್ನಪ್ಪಿದ್ದಾರೆ.
ಆಸ್ಪತ್ರೆ ಸಿಬ್ಬಂದಿ ವಿರುದ್ಧ ಮೃತ ಅನುಷಾ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗ್ಗೆ ಸಹೋದರನ ಜೊತೆಗೆ ಆಸ್ಪತ್ರೆಗೆ ತೆರಳಿದ್ದ ಅನುಷಾ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಪ್ರತಿ ತಿಂಗಳು ಎಂಜೆಕ್ಷನ್ ಹಾಕಿಸಿಕೊಳ್ಳುತ್ತಿದ್ದರು. ಅದೇ ರೀತಿ ಇಂದು ಇಂಜೆಕ್ಷನ್ ಗಾಗಿ ಆಸ್ಪತರೆಗೆ ಹೋಗಿದ್ದರು. ಇಂಜೆಕ್ಷನ್ ಹಾಕಿಸಿಕೊಂಡ ನಂತರ ನಾಲಿಗೆ ಕಚ್ಚಿಕೊಂಡು ಸಾವನ್ನಪ್ಪಿದ್ದಾರೆ.








