ಚಿಕ್ಕಬಳ್ಳಾಪುರ :ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ಕಳ್ಳತನ ಮಾಡಲಾಗಿದ್ದು, ಸತ್ತಂತೆ ನಡೆಸಿ ಒಂಟಿ ಮಹಿಳೆ ದರೋಡೆಕೋರರಿಂದ ಬಚಾವ್ ಆಗಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟನಗರದ ಇಲಾಹಿ ನಗರದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಚಿನ್ನಾಭರಣ ದೋಚಿದ್ದಾರೆ. ಈ ವೇಳೆ ಮಹಿಳೆ ಸತ್ತಂತೆ ನಟಿಸಿ ದರೋಡೆಕೊರರಿಂದ ಬಚಾವ್ ಆಗಿದ್ದಾರೆ.
ಇಲಾಹಿ ನಗರದಲ್ಲಿ ಮುಬಾರಕ್ ಎಂಬುವರ ಮನೆಯಲ್ಲಿ ದರೋಡೆ ನಡೆದಿದ್ದು, ಮಹಿಳೆಯನ್ನು ಕಟ್ಟಿಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ. ಬಾಯಿ, ಕಣ್ಣು, ಕಾಲಿಗೆ ಟೇಪ್ ನಿಂದ ಕಟ್ಟಿಹಾಕಿ ಚಿತ್ರಹಿಂಸೆ ನೀಡಿದ್ದಾರೆ. ಬಳಿಕ ಮನೆಯಲ್ಲಿದ್ದ ಸುಮಾರು 1 ಕೆಜಿ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.
ಸದ್ಯ ಗಾಯಾಳು ಮಹಿಳೆಯನ್ನು ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.








