ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ಮಹಿಳೆ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
ಬೆಂಗಳೂರಿನ ದೊಡ್ಡ ನಾಗಮಂಗಲದ ಸಾಯಿ ಲೇಔಟ್ ನಲ್ಲಿ ಈ ಕೃತ್ಯ ನಡೆದಿದ್ದು, ಸ್ನೇಹಿತನ ಮನೆಗೆ ಬಂದಿದ್ದ ಮಹಿಳೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗಳು ನಂತರ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ಪಡೆದ ಕಾಮುಕರು ಮನೆಯಲ್ಲಿದ್ದ ಫ್ರಿಡ್ಜ್ ಹಾಗೂ ವಾಷಿಂಗ್ ಮಷಿನ್, ಎರಡು ಮೊಬೈಲ್ ಸೇರಿದಂತೆ ಮನೆಯಲ್ಲಿದ್ದ ಪೀಠೋಪಕರಣ ದೋಚಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ಧಾರೆ.
ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಮೂವರು ಶಂಕಿತ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.