ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬೈಕ್ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕು ಕೇತನಾಯಕನಹಳ್ಳಿಯಲ್ಲಿ ಬೈಕ್ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ದ್ಯಾವಮ್ಮ(50) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಚಿಂತಾಮಣಿ -ದಿಬ್ಬೂರಹಳ್ಳಿ ರಸ್ತೆಯ ಕೇತನಾಯಕನಹಳ್ಳಿ ಸಮೀಪ ಗ್ರಾಮದ ನಾಗೇಶ್ ಎಂಬುವರ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಸೀರೆಯ ಸೆರಗು ಬೈಕ್ ಚಕ್ರಕ್ಕೆ ಸಿಲುಕಿ ದ್ಯಾವಮ್ಮ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಂಜಿಗುಂಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನಾಗೇಶ್ ಬೈಕ್ ನಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ನ ಚಕ್ರಕ್ಕೆ ಸೀರೆಯ ಸೆರಗು ಸಿಲುಕಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ದಿಬ್ಬೂರಹಳ್ಳಿ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.








