ಹಾಸನ : ಹಾಸನ ಜಿಲ್ಲೆಯಲ್ಲಿ ಘೋ ಘಟನೆಯೊಂದು ನಡೆದಿದ್ದು, ಪ್ರೀತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬೈರಗೊಂಡನಹಳ್ಳಿಯಲ್ಲಿ ನಡೆದಿದೆ.
ಬೈರಗೊಂಡನಹಳ್ಳಿ ಗ್ರಾಮದ ದರ್ಶನ್ (22) ಬೇವಿನಹಳ್ಳಿಯಲ್ಲಿರುವ ಅಜ್ಜಿಯ ಮನೆಯಿಂದ ಕಾಲೇಜಿಗೆ ಹೋಗುತ್ತಿದ್ದ. 5-6 ವರ್ಷಗಳಿಂದ ದರ್ಶನ್ ಹಾಗೂ ಯುವತಿ ಪ್ರೀತಿಸಿಸುತ್ತಿದ್ದರು. ಮದುವೆಗೆ ಯುವತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವಕ ದರ್ಶನ್ ಫೆ.5 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಕೂಡಲೇ ಸ್ನೇಹಿತರು ದರ್ಶನ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು.
ದರ್ಶನ್ ತೀವ್ರ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪೋಷಕರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ದರ್ಶನ್ ಮೃತಪಟ್ಟಿದ್ದಾರೆ. ಹೀಗಾಗಿ ಮೃತ ದರ್ಶನ್ ಭಾವ ಯುವತಿ ವಿರುದ್ಧ ದೂರು ನೀಡಿದ್ದಾರೆ. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.