ಆಂಧ್ರಪ್ರದೇಶ : ಎರಡು ಮಕ್ಕಳ ತಾಯಿ 15 ವರ್ಷದ ಹುಡುಗನೊಂದಿಗೆ ಓಡಿಹೋದ ಘಟನೆ ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ಗುಡಿವಾಡ ಪಟ್ಟಣದ ಮಹಿಳೆ ಅದೇ ಪ್ರದೇಶದಲ್ಲಿ ವಾಸಿಸುತ್ತಿದ್ದ ಹುಡುಗನೊಂದಿಗೆ ಸಂಬಂಧ ಹೊಂದಿದ್ದಳು ಎನ್ನಲಾಗಿದೆ.
BIGG BREAKING NEWS : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಪೊಲೀಸ್ ವಶಕ್ಕೆ
ಎಂಟನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ, ಜುಲೈ 19 ರಂದು ನಾಪತ್ತೆಯಾಗಿದ್ದನು. ಈ ಸಂಬಂಧ ಬಾಲಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.
ಆರೋಪಿ ಮಹಿಳೆ ಸ್ವಪ್ನಾ ಎಂದು ಗುರುತಿಸಲಾಗಿದ್ದು, ಬಾಲಕನ ಅದೇ ಪ್ರದೇಶದಲ್ಲಿ ತನ್ನ ಕುಟುಂಬದೊಂದಿಗೆ ವಾಸಿಸುತ್ತಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ.
ಜುಲೈ 26 ರಂದು ಹೈದರಾಬಾದಿನ ಬಾಲನಗರದಲ್ಲಿ ಮಹಿಳೆ ಮತ್ತು ಅಪ್ರಾಪ್ತ ಬಾಲಕನನ್ನು ಪತ್ತೆ ಮಾಡಲಾಗಿದೆ ಎಂದು ಗುಡಿವಾಡ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ದುರ್ಗಾರಾವ್ ತಿಳಿಸಿದ್ದಾರೆ.
ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ