ಬೆಂಗಳೂರು: ರಾಜ್ಯದ ಜನರ ಸಮಸ್ಯೆ ನಿವಾರಿಸೋ ನಿಟ್ಟಿನಲ್ಲಿ ಸಿಎಂ ಸಿದ್ಧರಾಮಯ್ಯ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಕೂಡ ಇದೇ ಕಾರ್ಯಕ್ರಮ ಮುಂದುವರೆಸಿದ್ದಾರೆ. ರಾಜ್ಯದ ವಿವಿಧೆಡೆ ಸಚಿವರು ಕೂಡ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ. ಇದರ ನಡುವೆ ರಾಜ್ಯದ ಜನರ ಸಮಸ್ಯೆಯನ್ನು ಕುಳಿತಲ್ಲೇ ಪರಿಹಾರಿಸೋ ನಿಟ್ಟಿನಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ಜಸ್ಟ್ ಒಂದು ಟ್ವಿಟ್ ಮಾಡಿದರೇ ಸಾಕು. ಕ್ಷಣಾರ್ಧದಲ್ಲಿ ನಿಮ್ಮ ಸಮಸ್ಯೆಗೆ ಪರಿಹಾರ ದೊರೆಯಲಿದೆ. ಆ ಬಗ್ಗೆ ಮುಂದೆ ಓದಿ.
ಮುಖ್ಯಮಂತ್ರಿ ಕಚೇರಿಯ (ಸಿಎಂಒ) ಸಾರ್ವಜನಿಕ ಕುಂದುಕೊರತೆ ಕೋಶದ ಹೊಸ ಉಪಕ್ರಮವು ನಾಗರಿಕರಿಂದ ಮೆಚ್ಚುಗೆಯನ್ನು ಗಳಿಸುತ್ತಿದೆ. ಏಕೆಂದರೆ ಸುಮಾರು ಒಂದು ವರ್ಷದ ಹಿಂದೆ ಎತ್ತಲಾದ ಮತ್ತು ಸಂಬಂಧಪಟ್ಟ ಇಲಾಖೆಗಳು ಪರಿಹರಿಸದ ದೂರುಗಳನ್ನು ಈಗ ಕೆಲವೇ ಗಂಟೆಗಳಲ್ಲಿ ಪರಿಹರಿಸಲಾಗುತ್ತಿದೆ.
ಈ ಉಪಕ್ರಮವು ಸಾಮಾಜಿಕ ಮಾಧ್ಯಮಗಳು, ಪತ್ರಗಳು, ಕರೆಗಳು ಮತ್ತು ಇಮೇಲ್ಗಳಂತಹ ವಿವಿಧ ವಿಧಾನಗಳ ಮೂಲಕ ಸಾರ್ವಜನಿಕರಿಂದ ಕುಂದುಕೊರತೆಗಳನ್ನು ಸಂಗ್ರಹಿಸುತ್ತದೆ ಮತ್ತು ತ್ವರಿತ ಪರಿಹಾರಕ್ಕಾಗಿ ಅವುಗಳನ್ನು ಸಂಬಂಧಿತ ಇಲಾಖೆಗಳಿಗೆ ಕಳುಹಿಸಿ, ಪರಿಹರಿಸೋ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.
ನಿಮ್ಮ ಯಾವುದೇ ರೀತಿಯ ಸಮಸ್ಯೆಗಳಿಗೆ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಿಎಂ ಸಿದ್ಧರಾಮಯ್ಯ ಅವರಿಗೆ ಸಲ್ಲಿಸಿದ್ರೇ ಸಾಕು, ಕ್ಷಣಾರ್ಧದಲ್ಲಿ ನಿಮ್ಮ ಸಮಸ್ಯೆ ಪರಿಹಾರ ಸಿಗಲಿದೆ. ಹಾಗಾದ್ರೇ ಆ ಸಂಪರ್ಕದ ವಿವರ ಈ ಕೆಳಗಿನಂತಿದೆ.
ಸಂಪರ್ಕ ವಿವರಗಳು
ಮೇಲ್: officeofosdtocm@gmail.com
ಕರೆ: 080-2203 3347
ಪತ್ರ ಬರೆದು ಸಮಸ್ಯೆ ಹೇಳಿಕೊಳ್ಳುವುದಾದರೇ ವಿಳಾಸ: ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಕೊಠಡಿ ಸಂಖ್ಯೆ 241, ವಿಧಾನಸೌಧ, ಅಂಬೇಡ್ಕರ್ ವೀದಿ, ಬೆಂಗಳೂರು 560001
X (ಹಿಂದೆ ಟ್ವಿಟರ್) ಮಾಡುವುದಾದರೇ: DM ಅಥವಾ @osd_cmkarnataka ಟ್ಯಾಗ್ ಮಾಡಿ.
ಸಾರ್ವಜನಿಕರು ಮತ್ತು ಮಾಧ್ಯಮ ಮಿತ್ರರಿಗೆ ! ಸಾರ್ವಜನಿಕ ಕುಂದುಕೊರತೆಗಳ ಮಾಹಿತಿಯನ್ನು ಈ ಕೆಳಕಂಡ ನಮೂನೆಯಲ್ಲಿ ಟ್ಯಾಗ್ ಮಾಡುವಂತೆ ಕೋರಿದೆ. ಈ ಕಛೇರಿಯ ಸೇವೆಗಳನ್ನು ಸದ್ಬಳಕೆ ಮಾಡುವ ಉದ್ದೇಶದಿಂದ ವೈಯಕ್ತಕ ಸಮಸ್ಯೆಗಳನ್ನು ಹೊರತುಪಡಿಸಿ ನೈಜವಾದ ಮತ್ತು ಸಂಪೂರ್ಣವಾದ ಮಾಹಿತಿಯನ್ನು ನೀಡುವಂತೆ ಕೋರಿದೆ.
ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ .
ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು. 2/2— Office of the OSD to CM Karnataka (@osd_cmkarnataka) July 11, 2023
ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಆಧಾರ್ ಸಂಖ್ಯೆ, ಕುಂದು ಕೊರತೆಯ ಬಗ್ಗೆ ಸಂಕ್ಷಿಪ್ತ ಮಾಹಿತಿ . ಕುಂದುಕೊರತೆ ಬಗ್ಗೆ ಈ ಹಿಂದೆ ಯಾವುದೇ ಕಚೇರಿ ಅಥವಾ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದಲ್ಲಿ ಕಚೇರಿ ಸ್ವೀಕೃತಿ ಪತ್ರ ಲಗತ್ತಿಸುವುದು ಹಾಗೂ ಅಗತ್ಯ ದಾಖಲೆಗಳನ್ನು ಲಗತ್ತಿಸುವುದು. ಆಧಾರ್ ಕಾರ್ಡ್ ಅಥವಾ ಬೇರೆ ಯಾವುದಾದರು ಗುರುತಿನ ಚೀಟಿ.