ಶಿವಮೊಗ್ಗ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಠಿಣ ಕಾನೂನುಕ್ರಮ ಜರುಗಿಸಲು ಒತ್ತಾಯಿಸಿ ಇಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಸುಪ್ರೀಂ ಕೋರ್ಟ್ನಲ್ಲಿ ಕಲಾಪ ನಡೆಯುತ್ತಿರುವಾಗ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ಘಟನೆಯನ್ನು ದಲಿತ ಸಂಘರ್ಷ ಸಮಿತಿ ತೀವೃವಾಗಿ ಖಂಡಿಸುತ್ತದೆ. ಇದು ಮುಖ್ಯ ನ್ಯಾಯಮೂರ್ತಿಗಳ ಮೇಲೆ ನಡೆದ ದಾಳಿಯಲ್ಲ, ಬದಲಾಗಿ ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ. ದೇಶದಲ್ಲಿ ಸನಾತನವಾದಿಗಳು ಸಂವಿಧಾನವನ್ನು ವಿರೋಧಿಸಿ ಕೊಂಡು ಬಂದವರು. ದಲಿತರೊಬ್ಬರು ಮುಖ್ಯ ನ್ಯಾಯಮೂರ್ತಿಗಳ ಪೀಠದಲ್ಲಿ ಕುಳಿತಿರುವುದನ್ನು ಸನಾತನವಾದಿಗಳು ಯಾವತ್ತೂ ಒಪ್ಪಿಕೊಳ್ಳುವುದಿಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ ಎಂದು ಮನವಿಯಲ್ಲಿ ಹೇಳಲಾಗಿದೆ.
ಇತ್ತೀಚೆಗೆ ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ ಭಾಗವಹಿಸಲು ನಿರಾಕರಿಸಿದ ಬಿ.ಆರ್.ಗವಾಯಿ ನಾನು ಅಂಬೇಡ್ಕರ್ ವಾದಿ. ಆರ್.ಎಸ್.ಎಸ್.ನಂತಹ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದರ ಬೆನ್ನಲ್ಲೆ ವಕೀಲರೊಬ್ಬರು ಚಪ್ಪಲಿ ಎಸೆಯುವ ಪ್ರಯತ್ನ ನಡೆಸಿರುವುದು ಸನಾತನವಾದಿಗಳ ಮುಖವಾಡ ಕಳಚಿದಂತೆ ಆಗಿದೆ. ತಕ್ಷಣ ಚಪ್ಪಲಿ ಎಸೆದ ವಕೀಲನ ವಿರುದ್ದ ಕಠಿಣ ಕಾನೂನುಕ್ರಮ ಜರುಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಸಂಚಾಲಕ ನಾಗರಾಜ್ ಮಾತನಾಡಿದರು. ನಾರಾಯಣ ಅರಮನೆಕೇರಿ, ಸುಂದರ ಸಿಂಗ್, ಈಶ್ವರ್, ಬಂಗಾರಪ್ಪ, ವೆಂಕಟೇಶ್, ಮಂಜುನಾಥ್ ಇನ್ನಿತರರು ಹಾಜರಿದ್ದರು.
‘ಸ್ಥಳೀಯರಿಗೆ ಉದ್ಯೋಗ’ ನೀಡುವ ನಿಟ್ಟಿನಲ್ಲಿ ಸಾಗರದಲ್ಲಿ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಓಪನ್: RBD ಮಹೇಶ್
ನಾಳೆ ಸಿಎಂ, ಡಿಸಿಎಂ ರಾಜ್ಯದ 525 ಗ್ರಾಮ ಪಂಚಾಯ್ತಿಗಳಲ್ಲಿ ನೀರಿದ್ದರೆ ನಾಳೆ ಯೋಜನೆಗೆ ಚಾಲನೆ: ಸಚಿವ ಎನ್.ಎಸ್ ಭೋಸರಾಜು