ಲಖನೌ(ಉತ್ತರ ಪ್ರದೇಶ): ನೋಯ್ಡಾದ ತನ್ನ ಹೌಸಿಂಗ್ ಸೊಸೈಟಿಯಲ್ಲಿ ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ ಆರೋಪದಲ್ಲಿ ಮಂಗಳವಾರ ಬಂಧಿತರಾಗಿರುವ ಸ್ವಯಂಘೋಷಿತ ಬಿಜೆಪಿ ಮುಖಂಡ ಶ್ರೀಕಾಂತ್ ತ್ಯಾಗಿ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
ಇತ್ತೀಚೆಗೆ ವೈರಲ್ ಆದ ವೀಡಿಯೊದಲ್ಲಿ, ಶ್ರೀಕಾಂತ್ ತ್ಯಾಗಿ ನೋಯ್ಡಾದ ಸೆಕ್ಟರ್ 93 ರ ಗ್ರಾಂಡ್ ಓಮ್ಯಾಕ್ಸ್ನಲ್ಲಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮತ್ತು ನಿಂದನೆ ಮಾಡಿದ್ದರು. ಅಂದಿನಿಂದ ತಲೆಮರೆಸಿಕೊಂಡಿದ್ದ ತ್ಯಾಗಿಯನ್ನು ಮಂಗಳವಾರ ಮೀರತ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ತ್ಯಾಗಿ ಅವರು ಬಿಜೆಪಿಯ ಕಿಸಾನ್ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಮತ್ತು ಅದರ ಯುವ ಸಮಿತಿಯ ರಾಷ್ಟ್ರೀಯ ಸಹ-ಸಂಯೋಜಕ ಎಂದು ಹೇಳಿಕೊಂಡಿದ್ದಾರೆ.
ಎಫ್ಬಿಯಲ್ಲಿ ವಿಡಿಯೋ ಪೋಸ್ಟ್ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಬೆಂಗಾಲಿ ನಟ, ಆಸ್ಪತ್ರೆಗೆ ದಾಖಲು